ಸೈಡ್ ವಿಂಗ್ / Sidewing

ಚಿತ್ರಗಳು : ಗೌರಿ ದತ್ತು

ಅಭಿನಯ ತರಂಗ ನಾಟಕ ಶಾಲೆಯ ಘಟಿಕೋತ್ಸವ ಸಮಾರಂಭದ ಒಂದು ನೋಟ ಇಲ್ಲಿದೆ .ಚಲನ ಚಿತ್ರ ನಿರ್ದೇಶಕ ಸೂರಿ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು …

ಬೇಲಿ ಮತ್ತು ಹೊಲ…..

ಸಂಗೀತ: ಕಿರಣ್ ಗೋಡ್ಖಿಂಡಿ
ಬೆಳಕು: ರವಿ. ಕುಲಕರ್ಣಿ
ವಿನ್ಯಾಸ, ನಿರ್ದೇಶನ: ಧನಂಜಯ ಕುಲಕರ್ಣಿ

ಕರ್ನಾಟಕ-ಆಂಧ್ರದ ಗಡಿಭಾಗದಲ್ಲಿ ನಡೆದ ಒಂದು ಘಟನೆಯನ್ನು ಆಧರಿಸಿ, ನಮ್ಮ ನಡುವಿನ ಅನನ್ಯ ಕಥೆಗಾರ ಕುಂ. ವೀರಭದ್ರಪ್ಪ ಅವರು ಬರೆದ ಕಿರುಕಾದಂಬರಿ ಬೇಲಿ ಮತ್ತು ಹೊಲ. ಇದರ ಹೆಸರೇ ಸೂಚಿಸುವಂತೆ “ಬೇಲಿ” ಆಳುವ ವ್ಯವಸ್ಥೆಯನ್ನು ಮತ್ತು “ಹೊಲ” ಸಾಮಾನ್ಯ ಪ್ರಜೆಯನ್ನು ಪ್ರತಿನಿಧಿಸುತ್ತದೆ.

ಕಾನೂನಿನಡಿ ನುಸುಳುವ ಹಾಗೂ ಭ್ರಷ್ಟತೆಯನ್ನು ನಿಭಾಯಿಸುವ ಕಲೆ ಕರಗತ ಮಾಡಿಕೊಂಡವನು ಹೇಗೆ ಆಳುವ ಪ್ರಕ್ರಿಯೆಯಲ್ಲಿ ಅಂತರ್ಗತನಾಗುತ್ತಾನೆ ಎಂಬುದು ಗಂಭೀರ ವಾಸ್ತವ. ಕಾನೂನು ಹಾಗೂ ವ್ಯವಸ್ಥೆಯ ಪ್ರತಿನಿಧಿಯಾಗಿ ಪೊಲೀಸ್ ಅಧಿಕಾರಿ ಪ…ೋತುರಾಜು, ದಲ್ಲಾಳಿ ವ್ಯವಸ್ಥಯ ಹರಿಕಾರನಾಗಿ ವಿಠ್ಠೋಬ, ಮಾಧ್ಯಮ ಪ್ರವರ್ತಕನಾಗಿ ಪತ್ರಕರ್ತ ಕಹಳೆ ಪಾಟೀಲ್, ಇಂದಿನ ರಾಜಕೀಯ ವ್ಯವಸ್ಥೆಯ ಪ್ರತಿನಿಧಿಯಾಗಿ ಭೀಮಣ್ಣ, ಸಾಮಾನ್ಯ ಪ್ರಜೆಯ ಪ್ರತಿನಿಧಿಯಾಗಿ ಚಂಬಸ್ವ, ಪಾರವ್ವ, ಬಡಕೊಟ್ರಯ್ಯ ಹಾಗೂ ಹಳ್ಳಿಗರು ಪ್ರತಿನಿಧಿಸುತ್ತಾರೆ.

ಇಡೀ ಕಥಾವಸ್ತುವಿನ ಅಂತರಾಳ ಪ್ರಜಾಸಮೂಹ ಅಥವಾ ಒಬ್ಬ ಸಾಮಾನ್ಯನಿಗೆ ಅನ್ಯಾಯ, ಶೋಷಣೆ, ಹಿಂಸೆಗೆ ಗುರಿಯಾದಾಗ ಪ್ರಸ್ತುತ ಸುದ್ದಿಮಾಧ್ಯಮಗಳು ಅದನ್ನು ತಿದ್ದುವ ಕಾಯಕದಲ್ಲಿ ಮಾಡುವ ಸದ್ದಾಗಲೀ, ಪ್ರಬುದ್ಧರು ನಡೆಸುವ ಪ್ರತಿಭಟನೆ, ಮುಷ್ಕರ, ಚಳುವಳಿಗಳಾಗಲೀ ಬರಬರುತ್ತಾ ತೀರಾ ಮಾಮೂಲಿಯೂ, ಯಾಂತ್ರಿಕವೂ ಆಗಿ ನಮ್ಮನ್ನಾಳುವ ಪ್ರಭುಗಳನ್ನು ತಿದ್ದುವ, ಶಿಕ್ಷಿಸುವ ಪರಿಣಾಮದ ತೀವ್ರತೆ ಕಳೆದುಕೊಳ್ಳುತ್ತಿವೆ ಎನ್ನುವುದು ನಮ್ಮ ಮುಂದಿರುವ ದುರಂತ..

ಇಂತಹ ಸಂದರ್ಭದಲ್ಲಿ ನ್ಯಾಯದಾನದ ಪ್ರಕ್ರಿಯೆ ಜನಸಾಮಾನ್ಯನ ಹಿತಕಾಪಾಡುವ ದಿಶೆಯಲ್ಲಿ ಇರುವ ವ್ಯಕ್ತಿಗತ ದೋಷಗಳು ಮತ್ತು ವ್ಯವಸ್ಥೆಯ ದೋಷಗಳನ್ನು ನಿವಾರಿಸುವ ಪರಿಣಾಮಕಾರಿ ಮಾರ್ಗವನ್ನು ನಾವೆಲ್ಲ ಇಂದು ಹುಡುಕಲೇಬೇಕಾಗಿದೆ.. ಒಟ್ಟಿನಲ್ಲಿ “ಬೇಲಿ” ಇದ್ದಾಗ ಪ್ರಜಾಸಮೂಹವೆಂಬ “ಹೊಲ” ದಲ್ಲಿ ಬೆಳೆದಿರುವ ಬೆಳೆಯನ್ನು ಪ್ರಾಮಾಣಿಕವಾಗಿ ರಕ್ಷಿಸಿಕೊಳ್ಳುವ ಪ್ರಜಾತಂತ್ರದ ಅರ್ಥವನ್ನೂ, ಕಾನೂನು ವ್ಯವಸ್ಥೆಯ ಅಸ್ತಿತ್ವವನ್ನೂ ಉಳಿಸಿಕೊಳ್ಳುತ್ತದೆ. ಇಲ್ಲವಾದರೆ ಸಮಾಜ ನಿರಂಕುಶವಾಗಿ ಅರಾಜಕತೆಯತ್ತ ಸಾಗುತ್ತದೆ ಎಂಬುದು ಒಟ್ಟೂ ಕಾದಂಬರಿಯ ಒಳದನಿ.

ಕನ್ನಡದ ಅನನ್ಯ ಕತೆಗಾರ ಕುಂ. ವೀರಭದ್ರಪ್ಪ ಅವರ ಕಾದಂಬರಿ “ಬೇಲಿ ಮತ್ತು ಹೊಲ”. ಇದನ್ನು ರಂಗರೂಪಕ್ಕಿಳಿಸಿದವರು, ಶ್ರೀ. ಜಿ.ಎಚ್. ರಾಘವೇಂದ್ರ. ಇದು ಮುಂಬೈನ ಕರ್ನಾಟಕ ಸಂಘದಲ್ಲಿ ಜನವರಿ ೧೫ ರಂದು ಸಂಜೆ ೪.೩೦ ಕ್ಕೆ ಪ್ರದರ್ಶನಗೊಳ್ಳಲಿದೆ. ಇದರ ತಾಂತ್ರಿಕ ಪ್ರದರ್ಶನ ಜನವರಿ ೯ ರಂದು ಸಂಜೆ ೬.೩೦ ಕ್ಕೆ ಹೊಸಪೇಟೆಯ ಪಂಪ ಕಲಾಮಂದಿರದಲ್ಲಿ ನಡೆಯಲಿದೆ.


ಚಿತ್ರಗಳು:ನಾಗರಾಜ ಸೋಮಯಾಜಿ

ಧಾರವಾಡದ ಕರ್ನಾಟಕ ಕಾಲೇಜಿನ ಸೃಜನಾ ರಂಗಮಂದಿರದಲ್ಲಿ ನಡೆದ ಮಳೆ ಬಿಲ್ಲು ಮಕ್ಕಳ ನಾಟಕೋತ್ಸವದಲ್ಲಿ ‘ಸಂಚಾರಿ ಥಿಯೇಟ್ರು’ ನಾಟಕ ತಂಡ ನರಿಗಳಿಗೇಕೆ ಕೋಡಿಲ್ಲ ನಾಟಕ ಪ್ರದರ್ಶಿಸಿತು . ಅಲ್ಲಿ  ತೆರೆಯ ಹಿಂದಿನ ಕೆಲವು ದೃಶ್ಯಗಳು ನಿಮಗಾಗಿ…

ಚಿತ್ರಗಳು : ಧನಂಜಯ ಕುಲಕರ್ಣಿ

ಧನಂಜಯ ಕುಲಕರ್ಣಿ ಅವರ ನಿರ್ದೇಶನದಲ್ಲಿ ಮೂಡಿ ಬಂದ ಜಯಂತ ಕಾಯ್ಕಿಣಿಯವರ ‘ಜತೆಗಿರುವನು ಚಂದಿರ’ ನಾಟಕದ ಕೆಲವು ದೃಶ್ಯಗಳು..

ವಿಜಯನಗರದ ಬಿಂಬ ರಂಗ ತಂಡದ ಮಕ್ಕಳು ಅಭಿನಯಿಸಿದ ‘ಶುದ್ಧಗೆ ‘ ನಾಟಕದ ಒಂದು ನೋಟ…

ಚಿತ್ರಗಳು :ಮಹಾಬಲ ಸೀತಲ್ಭಾವಿ

ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳು ನಟಿಸಿದ ಚೆರ್ರಿ ಆರ್ಚರ್ಡ್ ನಾಟಕದ ಒಂದು ನೋಟ…

ಚಿತ್ರಗಳು :ಕಾವ್ಯ ಶ್ರೀ

ಬೆಂಗಳೂರಿನ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ದ ವಿಧ್ಯಾರ್ಥಿಗಳು ಅಭಿನಯಿಸಲಿರುವ ಭವಭೂತಿ ಯ ‘ಉತ್ತರ ರಾಮ ಚರಿತೆ’ ನಾಟಕದ ಒಂದು ನೋಟ…

 

-ಡಾ.ಅರುಣ್ ಜೋಳದ ಕೂಡ್ಲಿಗಿ

ಕನ್ನಡ ಜಾನಪದ

ಕುತೂಹಲಕ್ಕೆ ಹಗಲುವೇಷಗಾರರು ಎನ್ನುವ ಪದವನ್ನು ಕೊಟ್ಟು ಗೂಗಲ್‌ನಲ್ಲಿ ಹುಡುಕಲು ಹೇಳಿದೆ. ಅಲ್ಲಿ ಬಂದ ನಾಲ್ಕೈದು ಪುಟಗಳ ಬಹುಪಾಲು ದಾಖಲುಗಳಲ್ಲಿ ರಾಜಕಾರಣಿಗಳನ್ನು ಹಗಲುವೇಷಗಾರರು ಎಂದು ಟೀಕಿಸಿದ ಉಲ್ಲೇಖಗಳೇ ಹೆಚ್ಚಾಗಿದ್ದವು. ಉಳಿದಂತೆ ಒಂದೆರಡು ಉಲ್ಲೇಖಗಳು ವೃತ್ತಿ ಕಲಾವಿದರಾದ ಹಗಲುವೇಷಗಾರರ ಬಗ್ಗೆ ಇದ್ದವು. ಇದು ಬಹುಶಃ ಹಗಲುವೇಷಗಾರರ ಸದ್ಯದ ಸ್ಥಿತಿಯನ್ನು ವಿವರಿಸಲು ಒಳ್ಳೆಯ ರೂಪಕ ಎಂದು ಭಾವಿಸುವೆ.

ಕಾರಣ ಇಂದು ಜನಪದ ಕಲಾವಿದರಾದ ಹಗಲುವೇಷಗಾರರನ್ನು ಮೀರಿಸುವಂತಹ ಹಗಲುವೇಷಗಳ ಮುಖವಾಡಗಳನ್ನು ರಾಜಕಾರಣಿಗಳು, ಅಧಿಕಾರಿಗಳು ಹಾಕಿ ಸಾಮಾನ್ಯ ಜನರನ್ನು ಮರುಳುಗೊಳಿಸುತ್ತಿದ್ದಾರೆ, ಹಗಲು ದರೋಡೆ ಮಾಡುತ್ತಿದ್ದಾರೆ. ಹಾಗಾಗಿ ಹಗಲುವೇಷ ಎನ್ನುವ ಪದವೇ ನಕಾರಾತ್ಮಕ ಅರ್ಥವನ್ನು ಪಡೆದುಕೊಂಡುಬಿಟ್ಟಿದೆ. ಆದರೆ ನಿಜಕ್ಕೂ ಹಗಲುವೇಷವನ್ನು ವೃತ್ತಿಯನ್ನಾಗಿಸಿಕೊಂಡ ಒಂದು ಜನಸಮುದಾಯದ ಗುಂಪೇ ಕರ್ನಾಟಕದಲ್ಲಿದೆ. ಆದರೆ ಇವರ ವೇಷ ಮೋಸಗೊಳಿಸಲಿಕ್ಕಲ್ಲ, ಬದಲಾಗಿ ಜನರನ್ನು ರಂಜಿಸಿಲು ಮತ್ತು ಸಾಂಸ್ಕೃತಿಕ ಪರಂಪರೆಯ ಕುರುಹುಗಳನ್ನು ಕಾಪಾಡಲು. ಹಾಗಾಗಿ ನಾಟಕ ಕಲೆಯನ್ನು ಮನೆ ಮುಂದೆ ಕೊಂಡೊಯ್ದಿರುವುದು ಈ ಅಲೆಮಾರಿ ಸಮುದಾಯದ ಹೆಗ್ಗಳಿಕೆ.

ಈ ಸಮುದಾಯ ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ನಾಣ್ಯಾಪುರ, ಹೊಸಪೇಟೆ ತಾಲೂಕಿನ ರಾಮಸಾಗರ, ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕುದರಮೋತಿ, ವಟಪರವಿ ಮುಂತಾದ ಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದು ಮೂಲತಃ ಅಲೆಮಾರಿ ಸಮುದಾಯ.

ಇವರ ಒಂದೊಂದು ಕುಟುಂಬಗಳು ಇಂತಿಷ್ಟು ಹಳ್ಳಿಗಳನ್ನು ಹಂಚಿಕೊಂಡಿರುತ್ತಾರೆ. ಆ ಹಳ್ಳಿಗಳಲ್ಲಿ ಏಳು ದಿನಗಳ ಕಾಲ ಬೇರೆ ಬೇರೆ ವೇಷ ಧರಿಸಿ, ಕೊನೆಯ ದಿನ ಇಂತಿಷ್ಟು ಎಂದು ವಂತಿಗೆಯನ್ನು ಧಾನ್ಯ, ಹಣ, ಬಟ್ಟೆ, ಜಾನುವಾರುಗಳ ರೂಪದಲ್ಲಿ ಪಡೆಯುತ್ತಾರೆ. ಇವರ ವೇಷಗಾರಿಕೆ ಮುಖ್ಯವಾಗಿ ರಾಮಾಯಣ, ಮಹಾಭಾರತದ ಉಪಕಥೆಗಳನ್ನು ಆಧರಿಸಿರುತ್ತವೆ. ಈ ಕಥನದ ನಿರೂಪಣೆಗಳಲ್ಲಿ ಇವರದೇ ಆದ ಸ್ಥಳೀಯ ಪಠ್ಯಗಳು ಸೇರಿರುತ್ತವೆ. ಇದು ರಾಮಾಯಣ, ಮಹಾಭಾರತದ ಅಧ್ಯಯನಕಾರರಿಗೆ ಒಂದು ಹೂಸ ಆಯಾಮವನ್ನು ಒದಗಿಸಬಲ್ಲದು. ಆಧುನಿಕ ಸಿನಿಮಾದ ಹಾಡುಗಳನ್ನು ಅವರದೇ ದಾಟಿಯಲ್ಲಿ ಹಾಡುತ್ತಾ ಈ ಕಾಲದವರೂ ಆಗುತ್ತಾರೆ.

ಇವರು ವಾರದ ಕೊನೆಯ ದಿನ ವಂತಿಗೆಯನ್ನು ಎತ್ತುವಾಗ ಇಡೀ ಊರಿನ ಪ್ರತಿ ಮನೆಯವರಿಗೂ ‘ಗೌಡ್ರೆ ನಿಮ್ಮಾವ ನಾಲ್ಕು ಮನೆ ಕೈ ಎತ್ತಿ ಕೋಡೋ ಮನೆತನಗಳು..ನೀವಾ ಇಂಗಂದ್ರ ಹ್ಯಾಂಗ..’ಎನ್ನುತ್ತಿದ್ದರು. ಇದು ಊರಲ್ಲಿ ಗೌಡರ ಮನೆತನಕ್ಕೆ ಮಾತ್ರ ಸಲ್ಲುವ ಗೌರವ ನಮಗೂ ಸಲ್ಲಿತೆಂದು ಹಲವರು ತಮ್ಮ ತಮ್ಮ ಕೀಳಿರಿಮೆಯನ್ನು ಬಿಟ್ಟು ಬದುಕಿಗೆ ಹೊಸ ಉತ್ಸಾಹವನ್ನು ಪಡೆಯುತ್ತಿದ್ದರು. ಹೀಗೆ ಹಗಲುವೇಷಗಾರರ ಬದುಕು ಮತ್ತು ಕಲೆ ಈಗಲೂ ಚೂರೂ ಬದಲಾವಣೆ ಇಲ್ಲದೆ ಮುಂದುವರಿಯುತ್ತಿದೆ.

ಇವರು ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕುದರಮೋತಿ ಎನ್ನುವ ಗ್ರಾಮದಲ್ಲಿ ಎರಡು ವರ್ಷಕ್ಕೊಮ್ಮೆ ಮೊಹರಂ ಹಬ್ಬಕ್ಕೆ ಇಡೀ ಕರ್ನಾಟಕದ ಹಗಲುವೇಷಗಾರರು ಒಂದೆಡೆ ಸೇರುತ್ತಾರೆ. ಇಲ್ಲಿಯೇ ಅವರ ನ್ಯಾಯಪಂಚಾಯ್ತಿ, ವಧು ವರರ ಅನ್ವೇಷಣೆ, ಮದುವೆ, ಮುಂತಾದ ಆಚರಣೆಗಳು ನಡೆಯುತ್ತವೆ. ಅವರ ವೇಷಗಾರಿಕೆಗೆ ಬೇಕಾಗುವ ಬಣ್ಣ, ಸಂಗೀತದ ಪರಿಕರಗಳನ್ನೂ ಕೊಳ್ಳಲಾಗುತ್ತದೆ.

ಈ ವರ್ಷ ಅಂದರೆ ಇದೇ ತಿಂಗಳ ಮೊಹರಂ ಕಡೇ ದಿನ ಡಿಸೆಂಬರ್ ೧೭ ರಂದು ಕುದರಮೋತಿಗೆ ಬೇಟಿ ನೀಡಿದರೆ ಇಡೀ ಕರ್ನಾಟಕದ ಹಗಲುವೇಷಗಾರರನ್ನು ಒಂದೆಡೆ ನೋಡಬಹುದಾಗಿದೆ.

ಹಗಲುವೇಷಗಾರರು ಮೂಲತಃ ಅಲೆಮಾರಿ ಸಮುದಾಯ. ಇವರು ಒಂದೆಡೆ ನೆಲೆನಿಲ್ಲುವುದಿಲ್ಲ. ಈ ಕಾರಣವೇ ಬಹುತೇಕ ಹಗಲುವೇಷಗಾರರ ಹೊಸ ತಲೆಮಾರು ಶಿಕ್ಷಣಕ್ಕೆ ತೆರೆದುಕೊಳ್ಳುವುದಕ್ಕೆ ಕಡಿವಾಣ ಹಾಕಿದೆ. ಕರ್ನಾಟಕದಲ್ಲಿ ವೃತ್ತಿಕಲೆಯನ್ನು ಉಳಿಸಿಕೊಂಡು ಬರುತ್ತಿರುವವರಲ್ಲಿ ಇವರು ಪ್ರಮುಖರು.

ಜನಪದ ಕಲೆಗಳು ನಶಿಸುತ್ತಿವೆ ಎಂದು ಹಲಬುವ ಜನಪದ ವಿದ್ವಾಂಸರಿಗೆ ಈ ಸಮುದಾಯ ಹೆಚ್ಚು ಸಂತೋಷವನ್ನು ಕೊಡಬಲ್ಲದು. ಆದರೆ ಈ ಸಮುದಾಯ ಶಿಕ್ಷಣಕ್ಕೆ ತೆರೆದುಕೊಂಡು ಆಧುನಿಕವಾಗಬೇಕೆಂಬ ಅಭಿವೃದ್ಧಿಪರ ಆಲೋಚನೆ ಮಾಡಿದಾಗ ಇದರ ಹಿಂದುಳಿಯುವಿಕೆಯ ಬಗ್ಗೆ ಆತಂಕವಾಗುತ್ತದೆ. ಯಾಕೆ ಹೀಗಾಗುತ್ತಿದೆ. ಇದು ಕೇವಲ ಹಗಲುವೇಷಗಾರರ ಸಮಸ್ಯೆಯಲ್ಲ, ಬಹುಪಾಲು ಅಲೆಮಾರಿ ಸಮುದಾಯಗಳ ಸಮಸ್ಯೆಯಾಗಿದೆ.

ಈ ಎಲ್ಲಾ ಅಲೆಮಾರಿ ಸಮುದಾಯಗಳಿಗೆ ಅವರದೇ ನೆಲೆಯಲ್ಲಿ ಜಾಗ್ರತಗೊಳಿಸುವ ಅಗತ್ಯವಿದೆ. ಅವರ ಮಕ್ಕಳಾದರೂ ಶಿಕ್ಷಣಕ್ಕೆ ತೆರೆದುಕೊಳ್ಳುವಂತಹ ವಾತಾವರಣವನ್ನು ಸೃಷ್ಠಿಸಬೇಕಿದೆ. ಅಲೆಮಾರಿ ಸಮುದಾಯಗಳ ಅಭಿವೃದ್ಧಿಯ ಹೆಸರಲ್ಲಿ ಸರಕಾರದ ಹಣ ಅವ್ಯಯವಾಗುವುದೇನೂ ತಪ್ಪಿಲ್ಲ, ಆದರೆ ಅದು ಎಲ್ಲಿ ವ್ಯಯವಾಗುತ್ತಿದೆ? ಅದರ ಲಾಭಗಳನ್ನು ಪಡೆದುಕೊಂಡವರಾರು? ಇಂತಹ ಪ್ರಶ್ನೆಗಳನ್ನು ಕೇಳಿಕೊಂಡರೆ ಸಿಗುವ ಉತ್ತರ ಬ್ರಷ್ಟ ಸರಕಾರದತ್ತ ಕೈತೋರಿಸುತ್ತದೆ. ಇಂತಹ ಯೋಜನೆಗಳ ಹಣವನ್ನು ನಿಜವಾಗಿ ತಲುಪಬೇಕಾದವರಿಗೆ ತಲುಪಿಸುವಂತಹ ಕರ್ತವ್ಯ ಕೂಡ ಜಾನಪದ ವಿದ್ವಾಂಸರ ಜವಾಬ್ದಾರಿ ಎಂದು ಅರಿಯಬೇಕಿದೆ.

ಈ ಹೊತ್ತು ಜನಪದ ಅಧ್ಯಯನಕಾರರು ಕೇವಲ ಜನಪದ ಕಲೆಯನ್ನು ಕಲೆ ಎನ್ನುವ ಚೌಕಟ್ಟಿನಲ್ಲಿ ಅಭ್ಯಸಿಸಬೇಕಿಲ್ಲ. ಬದಲಾಗಿ ಜನಪದ ಕಲಾವಿದರ ಬದುಕಿನ ನೆಲೆಯಲ್ಲಿ, ಮತ್ತವರು ಆಧುನಿಕ ಶಿಕ್ಷಣಕ್ಕೆ ತೆರೆದುಕೊಂಡು ಬದಲಾಗಬೇಕಾದ ಆಶಯಗಳಲ್ಲಿ ಅಧ್ಯನಗಳ ತಾತ್ವಿಕತೆಯನ್ನು ಬದಲಾಯಿಸಿಕೊಳ್ಳಬೇಕಿದೆ.

 

ಚಿತ್ರಗಳು : ಧನಂಜಯ ಕುಲಕರ್ಣಿ

ಬೇಲಿ ಮತ್ತು ಹೊಲ ನಾಟಕದ ರಂಗ ತಾಲೀಮಿನ ಒಂದು ನೋಟ ಇಲ್ಲಿದೆ…

ಚಿತ್ರಗಳು: ಕಿನ್ನರ ಮೇಳ

ಶಿವಮೊಗ್ಗ ಜಿಲ್ಲೆಯ, ಸಾಗರ ತಾಲೂಕಿನ  ತುಮುರಿ ಯಲ್ಲಿ 1990 ರಲ್ಲಿ ಪ್ರಾರಂಭವಾದ ನಾಟಕ ತಂಡ ‘ಕಿನ್ನರ ಮೇಳ’ .ರಂಗ ನಿರ್ದೇಶಕ ‘ಕೆ ಜಿ ಕೃಷ್ಣ ಮೂರ್ತಿ’ ಅವರ ಸಾರಥ್ಯದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ನಾಟಕ ಪ್ರದರ್ಶನ ಗಳನ್ನು ನೀಡುತ್ತಾ ಬಂದಿದೆ . ಹೀಗೆಕಿನ್ನರ ಮೇಳ ನಾಟಕ ತಂಡ ಬೇರೆ ಬೇರೆ ಕಡೆಗಳಲ್ಲಿ ಅಭಿನಯಿಸಿದ ನಾಟಕಗಳ ಒಂದು ನೋಟ ಇಲ್ಲಿದೆ.

Established in 1990 as a group of adult actors performing for children at Tumari, a tiny village surrounded by back waters of Sharavathi reservoir. Later as per the need of the hour it has been undertaking several projects and programmes regularly.
Following are regular activities of the institution:

1.Kinnara mela theatre company consists of 12 rural full time professional actors who are involved in two play productions every year : one for children and the other for college level students. For the first two months of the yea, the company rehearses the plays and in the next 6 months it travels throughout Karnataka and outside to perform the plays mainly at schools and colleges especially in rural areas. The performances take place in day time without disturbing the academic activities of the educational institutions. The company perform an average of 140 – 160 shows in a year.

2.The third major production of the company is a play on for adults.It is performed in memory of Shri K V Subbanna either on his birthday in February or on his memorial day in July.In this series, so far we have produced Rabindrnath Tagore’s CHITRA directed by K G Krishnamurthy, Euripedes’ MEDEA directed by Samkutty Pattomkari, Chandrasekhar Kambar’s HULIYANERALU directed by K G Krishnamurthy, CHITHRAPATA RAMAYANA directed by Chidambara Rao Jambe and Bertolt Brecht’s MOTHER COURGE directed by K S Rajendran.

3. Kinnara mela conducts every year a week-long Art and Education workshop for school teachers. this workshop aims at training the participants in innovative methods of classroom teaching using theatre in imparting formal education.

4. A month long childrens theatre workshop at 3-4 venues every year is an ongoing activity of Kinnara mela. these workshops are conducted by the aco-teachers of Mela.

5.A 20 day-long cultural initiation workshop for specially challenged rural kids at Tumari is a regular annual feature of Kinnara mela.

6. one of the recent additions to our group’s activities is imparting training in yakshagana, the traditional theatre of karnataka to youngsters in 3-4 govt run schools i memory of K G Ravindra.

7.A week long Cultural festival at Tumari for rural mass to witness various kinds of cultural forms is another annual event of Kinnara mela.

8. Our publishing programme brings out titles on children’s literature in Kannada.

Enter your email address to subscribe to this blog and receive notifications of new posts by email.

Join 21 other followers
ಮುಖ್ಯ ಸಂಪಾದಕ: ಜಿ ಎನ್ ಮೋಹನ್ ಸಂಪಾದಕ: ಸುಘೋಷ್ ಎಸ್ ನಿಗಳೆ

ಸರ್ಕಲ್ ಸೇರೋಕೆ…

sidewing.mmh@gmail.com

ಸ್ವಗತ….

ಅಂತರ್ಜಾಲ ಲೋಕದಲ್ಲಿ ರಂಗಭೂಮಿಗೆ ರಂಗಸ್ಥಳ ಸ್ಪೈಡರ್ ನ ಸೈಡ್ ವಿಂಗ್. ರಂಗ ಜಗತ್ತಿನ ಆಗುಹೋಗುಗಳನ್ನು ಸೈಡ್ ವಿಂಗ್ ನಲ್ಲಿ ನಿಂತು ನೋಡುವ, ಅದನ್ನು ರಂಗಾಸಕ್ತರಿಗೆ ತಲುಪಿಸುವ ಉದ್ದೇಶ ನಮ್ಮದು.

Visit Mayflower in Facebook

ಅಕ್ಟೋಬರ್ 2022
ಸೋಮ ಮಂಗಳ ಬುಧ ಗುರು ‍ಶು ಶನಿ ಭಾನು
 12
3456789
10111213141516
17181920212223
24252627282930
31  

ನಾಟ್ಕ ನೋಡಿದವ್ರು....

  • 24,985 hits

ಸದ್ದು ನಾಟಕ ನಡೀತಿದೆ....

CLAPS